ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್
"ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಎನ್ ಲೋಕೇಶ್ ಗೌಡರ ನೇತೃತ್ವದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ" ಹಮ್ಮಿಕೊಳ್ಳಲಾಗಿದೆ ಇದೇ ಭಾನುವಾರ
ಪೀಣ್ಯ ದಾಸರಹಳ್ಳಿ :ಕ್ಷೇತ್ರದ ಬಿಜೆಪಿ ಅಧ್ಯಕ್ಷ ಹಾಗೂ ಮಾಜಿ ಪಾಲಿಕೆ ಸದಸ್ಯ ಎನ್.ಲೋಕೇಶ್ ಗೌಡರ ನೇತೃತ್ವದಲ್ಲಿ ಜಿಕೆಡಬ್ಲ್ಯೂ ಲೇಔಟ್ ರಸ್ತೆ ಮುನಿಗಂಗಪ್ಪ ಮೈದಾನದಲ್ಲಿ ಶ್ರೀ ರಾಮನ ದೇವಸ್ಥಾನ ಹತ್ತಿರ ಪೀಣ್ಯ 2ನೇ ಹಂತ ದಿನಾಂಕ:12- 02- 2023ರಂದು ಭಾನುವಾರ ಸಾಯಂಕಾಲ 5 ಗಂಟೆಯಿಂದ ಸಂಜೆ 8 ಗಂಟೆವರೆಗೆ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಜರುಗಲಿದ್ದು ಕಾರ್ಯಕ್ರಮದ ದಿವ್ಯ ಸಾನಿಧ್ಯ ಪರಮ ಪೂಜ್ಯ ಜಗದ್ಗುರು ಶ್ರೀಶ್ರೀಶ್ರೀಡಾ.ನಿರ್ಮಲಾನಂದನಾಥ ಮಹಾಸ್ವಾಮಿಗಳು ಪೀಠಾಧ್ಯಕ್ಷರು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಹಾಗೂ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀಶ್ರೀ ನಂಜಾವಧೂತ ಮಹಾ ಸ್ವಾಮಿಜಿಗಳು ಪೀಠಾಧ್ಯಕ್ಷರು ಸ್ಪಟಿಕಪುರಿ ಮಹಾ ಸಂಸ್ಥಾನ ಮಠ ಸಾನಿಧ್ಯ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿಗಳು ಬೆಂಗಳೂರು ಉತ್ತರ ಲೋಕಸಭಾ ಸದಸ್ಯರು ಡಿ ವಿ ಸದಾನಂದ ಗೌಡರು,ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಾಜಿ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರು ಎಸ್ ಮುನಿರಾಜು, ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಅಧ್ಯಕ್ಷರು ಬಿ.ನಾರಾಯಣ್ ಮತ್ತು ಬೆಂಗಳೂರು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರು ಜಿ.ಮರಿಸ್ವಾಮಿ ಭಾಗವಹಿಸಲಿದ್ದಾರೆ ಈ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಅಂಗವಾಗಿ 12ಸಾವಿರ ತಿರುಪತಿ ಲಾಡು ಮತ್ತು ಅನ್ನಸಂತರ್ಪಣೆ ನಡೆಯಲಿದೆ ಈ ದೇವರ ಕಾರ್ಯಕ್ಕೆ 7,8ಸಾವಿರ ಜನರಿಗೆ ಟೋಕನ್ ವಿತರಿಸಲಾಗಿದೆ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಸಮಸ್ತ ನಾಗರಿಕ ಬಂಧು ಭಗನಿಯರು ಶ್ರೀ ಶ್ರೀನಿವಾಸನ ಕೃಪೆಗೆ ಪಾತ್ರರಾಗಬೇಕಾಗಿ ಎಂದು ಕ್ಷೇತ್ರದ ಬಿಜೆಪಿ ಅಧ್ಯಕ್ಷ ಎನ್ ಲೋಕೇಶ್ ಗೌಡ್ರು ಪತ್ರಿಕೆಗೆ ತಿಳಿಸಿದ್ದಾರೆ.