ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಬೆಂಗಳೂರು ಉತ್ತರ ಜಿಲ್ಲೆಯ ಹಿಂದುಳಿದ ವರ್ಗಗಳ ಸಮಾವೇಶ



ಪೀಣ್ಯ ದಾಸರಹಳ್ಳಿ:' ಈ ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಸುಮಾರು ವರ್ಷಗಳು ಆಡಳಿತ ಮಾಡಿದೆ. ಆದರೆ ಹಿಂದುಳಿದ ಆಯೋಗಕ್ಕೆ ಸಾಂವಿಧಾನಿಕ ಮಾನ್ಯತೆ ಕೊಟ್ಟಿರಲಿಲ್ಲ. ಅದನ್ನು ನರೇಂದ್ರ ಮೋದಿ ಸರ್ಕಾರ ಕೊಟ್ಟ ಹೆಗ್ಗಳಿಕೆ ಇದೆ' ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ತಿಳಿಸಿದರು.
     ಬಾಗಲಗುಂಟೆಯ ಎಂ.ಇ.ಐ ಆಟದ ಮೈದಾನದಲ್ಲಿ ಮಾಜಿ ಶಾಸಕ ಎಸ್. ಮುನಿರಾಜು ನೇತೃತ್ವದಲ್ಲಿ ಆಯೋಜಿಸಲಾದ ಬೆಂಗಳೂರು ಉತ್ತರ ಜಿಲ್ಲೆ ಓಬಿಸಿ ಸಮಾವೇಶದಲ್ಲಿ ಮಾತನಾಡಿದರು.
     ' ದೇಶ ಅಭಿವೃದ್ಧಿಯಾಗಬೇಕು ಅಂದರೆ ಹಿಂದುಳಿದ ವರ್ಗಗಳು ಅಭಿವೃದ್ಧಿ ಯಾದಾಗ ಮಾತ್ರ ಸಾಧ್ಯ. ಹಾಗಾಗಿ ಬಿಎಸ್ ಯಡಿಯೂರಪ್ಪನವರು ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು, ಎಂಬಂತೆ ಸಾಮಾಜಿಕ ನ್ಯಾಯ ಕಲ್ಪಿಸಿದರು' ಎಂದರು.
    ' ಹಿಂದುಳಿದ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಮತ್ತು ಕೇಂದ್ರ ಬಜೆಟ್ ನಲ್ಲಿ ಸಾಕಷ್ಟು ಅನುದಾನವನ್ನು ಮೀಸಲಿಟ್ಟಿದ್ದಾರೆ. ಈ ಯೋಜನೆಯ 35 ಕೋಟಿ ಜನರು ಸರ್ಕಾರಿ ಯೋಜನೆಗಳ ಫಲಾನುಭವಿಗಳಾಗಿದ್ದಾರೆ' ಎಂದು ತಿಳಿಸಿದರು.
     ರಾಜ್ಯ ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ನೆ.ಲ.  ನರೇಂದ್ರಬಾಬು ಮಾತನಾಡಿ' ರಾಷ್ಟ್ರ ಮತ್ತು ರಾಜ್ಯದಲ್ಲಿ ಅಭಿವೃದ್ಧಿಗೆ ಹಲವಾರು ಯೋಜನೆ ತರುವುದರ ಮುಖೇನ ಹಿಂದುಳಿದ ಸಮುದಾಯಗಳಿಗೆ ಅಭಿವೃದ್ಧಿ ನಿಗಮಗಳನ್ನು ಮಾಡಿ ಸಮಾಜವನ್ನು ಎತ್ತುವ ಕೆಲಸ ಮಾಡಿರುವುದು ಬಿಜೆಪಿ ಸರ್ಕಾರ' ಎಂದರು.
    ಮಾಜಿ ಶಾಸಕ ಎಸ್. ಮುನಿರಾಜು ಮಾತನಾಡಿ' ದಾಸರಹಳ್ಳಿ ಕ್ಷೇತ್ರದಲ್ಲಿ ಎರಡು ಬಾರಿ ಪಾಲಿಕೆ ಚುನಾವಣೆಗಳಲ್ಲಿ ಕುರುಬ ಯಾದವ ಸೇರಿ ಒಬಿಸಿ ಸಮಾಜದ ನಾಲ್ಕು ಜನ ಅಭ್ಯರ್ಥಿಗಳಿಗೆ ಅವಕಾಶ ಕೊಡಲಾಗಿತ್ತು, ಅದರಲ್ಲೂ ಮಹಿಳೆಯರಿಗೆ ಆದ್ಯತೆ ನೀಡಲಾಗಿತ್ತು' ಎಂದರು.
    ಈ ಸಂದರ್ಭದಲ್ಲಿ ಸಂಸದರಾದ ಡಿ.ವಿ. ಸದಾನಂದ ಗೌಡ, ಪಿ.ಸಿ. ಮೋಹನ್, ರಾಜ್ಯಸಭಾ ಸದಸ್ಯ ಜಗ್ಗೇಶ್, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಮರಿಸ್ವಾಮಿ, ದಾಸರಹಳ್ಳಿ ಮಂಡಲ ಅಧ್ಯಕ್ಷ ಎನ್. ಲೋಕೇಶ್, ದಾಸರಹಳ್ಳಿ ಬಿಜೆಪಿ ಉಸ್ತುವಾರಿ ಉಮೇಶ್ ಶೆಟ್ಟಿ, ಕ್ಷೇತ್ರದ ಒಬಿಸಿ ಅಧ್ಯಕ್ಷ ಬಿಎಂ ಮಂಜು, 9 ವಿಧಾನಸಭಾ ಕ್ಷೇತ್ರದ ಓಬಿಸಿ ಪದಾಧಿಕಾರಿಗಳು ಭಾಗವಹಿಸಿದ್ದರು

Popular posts from this blog

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

karanataka Fast Express News