ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್


‘ವಿಜಯ ಸಂಕಲ್ಪ’ ವಿಜಯೋತ್ಸವಕ್ಕೆ ದಾರಿ: ಬಸವರಾಜ ಬೊಮ್ಮಾಯಿ 
ಬೆಂಗಳೂರು: ವಿಜಯ ಸಂಕಲ್ಪವು ವಿಜಯ ಪಥವಾಗಿ ವಿಜಯೋತ್ಸವಕ್ಕೆ ದಾರಿ ಮಾಡಿ ಕೊಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಪದ್ಮನಾಭನಗರದಲ್ಲಿ ಇಂದು ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸೂರ್ಯ ಪೂರ್ವದಲ್ಲಿ ಹುಟ್ಟುವುದು ಎಷ್ಟು ಸತ್ಯವೋ ಬಿಜೆಪಿ ರಾಜ್ಯದ ಅಸೆಂಬ್ಲಿ ಚುನಾವಣೆಯಲ್ಲಿ 140ಕ್ಕೂ ಹೆಚ್ಚು ಸೀಟು ಗೆದ್ದು ಅಧಿಕಾರ ಪಡೆಯುವುದು ಅಷ್ಟೇ ಸತ್ಯ ಎಂದರು. ರಾಜ್ಯದಲ್ಲಿ ಬಿಜೆಪಿ ಕಮಲ ಅರಳಲಿದೆ. ವಿಧಾನಸಭೆಯ ಮೂರನೇ ಮಹಡಿಯಲ್ಲಿ ಮತ್ತೊಮ್ಮೆ ಆ ಭುವನೇಶ್ವರಿಯ ಸೇವೆ ಮಾಡಲು ಬಿಜೆಪಿಗೆ ಜನರ ಆಶೀರ್ವಾದ ಲಭಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದೆಲ್ಲೆಡೆ ಬಿಜೆಪಿ ಪರ ಸುನಾಮಿ ಎದ್ದಿದೆ. ಜನರು ಬಿಜೆಪಿ ಆಡಳಿತ ಬಯಸುತ್ತಿದ್ದಾರೆ. ನಮ್ಮ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಜಿ, ಅಮಿತ್ ಶಾ, ಪಕ್ಷದ ಕೇಂದ್ರದ ನಾಯಕರು ಬಂದಾಗ ಬಿಜೆಪಿ ಪರ ಅಲೆ ಹೆಚ್ಚಾಗುತ್ತ ಹೋಗುತ್ತಿದೆ ಎಂದು ಅವರು ನುಡಿದರು.
ಸಚಿವ ಅಶೋಕ್ ಅವರು ನಿಮ್ಮ ಹೃದಯದಲ್ಲಿ ಸ್ಥಾನ ಪಡೆದುದು ಇಲ್ಲಿನ ಜನರನ್ನು ನೋಡಿದಾಗ ವ್ಯಕ್ತವಾಗುತ್ತಿದೆ. ಈ ಬಾರಿ ಅವರು ಒಂದು ಲಕ್ಷಕ್ಕಿಂತ ಹೆಚ್ಚು ಮತಗಳ ಅಂತರದಿಂದ ಗೆಲ್ಲುವರೆಂಬ ವಿಶ್ವಾಸ ನನಗಿದೆ ಎಂದು ತಿಳಿಸಿದರು.
ಮನೆಮನೆಗೆ ಹೋಗಿ ಕೇಂದ್ರ- ರಾಜ್ಯ ಸರಕಾರಗಳ ಜನಪರ ಕೆಲಸದ ಮಾಹಿತಿ ಕೊಡಬೇಕು. ಜನಮನವನ್ನು ಗೆದ್ದು ಪಕ್ಷ ಗೆಲ್ಲುವಂತೆ ನೋಡಿಕೊಳ್ಳಿ ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

Popular posts from this blog

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

karanataka Fast Express News