ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್
*ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಅಮ್ ಆದ್ಮಿ ಪಕ್ಷದ ಅಭ್ಯರ್ಥಿ ಕೀರ್ತನ್ ಕುಮಾರ್ ಮಂಜಪ್ಪ ಅವರಿಂದ ನಾಮಪತ್ರ ಸಲ್ಲಿಕೆ*
ಬೆಂಗಳೂರಿನ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿರುವ ಕೀರ್ತನ್ ಕುಮಾರ್ ಮಂಜಪ್ಪ ಅವರು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ನಾಯಕ ಹಾಗೂ ರಾಜ್ಯಸಭಾ ಸದಸ್ಯ ರಾಘವ್ ಚಡ್ದಾ ಇವರೊಂದಿಗೆ ಬೃಹತ್ ರ್ಯಾಲಿ, ಮೆರವಣಿಗೆ ಮೂಲಕ ತಮ್ಮ ನಾಮಪತ್ರ ಸಲ್ಲಿಕೆಯನ್ನ ಮಾಡಿದ್ದಾರೆ.
ಇಂದು ಬೆಳಗ್ಗೆ 10 ಗಂಟೆಗೆ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಅಮ್ ಆದ್ಮಿ ಪಕ್ಷದ ಅಭ್ಯರ್ಥಿ ಕೀರ್ತನ್ ಕುಮಾರ್ ಮಂಜಪ್ಪ ಅವರು ನಾಮಪತ್ರ ಸಲ್ಲಿಕೆಗೂ ಮುನ್ನ ದಾಸರಹಳ್ಳಿಯ ಡಿಫೆನ್ಸ್ ಕಾಲೋನಿ ಬಳಿ ಇರುವ ಬಲಮುರಿ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪ್ರಾರ್ಥಿಸಿದ್ದಾರೆ.
ಬಳಿಕ ಆಪ್ ಪಕ್ಷದ ಅಭ್ಯರ್ಥಿ ಕೀರ್ತನ್ ಕುಮಾರ್ ಮಂಜಪ್ಪ, ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ನಾಯಕ ರಾಘವ್ ಚಡ್ಡಾ, ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರು ಪೃಥ್ವಿ ರೆಡ್ಡಿ ಹಾಗೂ ಆಮ್ ಆದ್ಮಿ ಪಕ್ಷದ ಪ್ರಚಾರ ಮತ್ತು ಜನಸಂಪರ್ಕ ಸಮಿತಿ ಅಧ್ಯಕ್ಷರಾಗಿರುವ ಮುಖ್ಯಮಂತ್ರಿ ಚಂದ್ರ ಸೇರಿದಂತೆ ಆಮ್ ಆದ್ಮಿ ಪಾರ್ಟಿಯ ನೂರಾರು ಕಾರ್ಯಕರ್ತರೊಟ್ಟಿಗೆ ಟಿ ದಾಸರಹಳ್ಲಿ, ಹೆಸರಘಟ್ಟ ಮೇನ್ ರೋಡ್ ಬಳಿ ಇರುವ ಸೌಂದರ್ಯ ಆರ್ಕಿಡ್ ನಿಂದ ಬಗಲಗುಂಟೆ ಬಿಬಿಎಂಪಿ ಕಚೇರಿವರೆಗೆ ಬೃಹತ್ ಮೆರವಣಿಗೆ ಮಾಡಿಕೊಂಡು ನಾಮಪತ್ರವನ್ನ ಸಲ್ಲಿಸಿದ್ದಾರೆ.