ಕರ್ನಾಟಕ ಫಾಸ್ಟ್ ಎಕ್ಸ್ ನ್ಯೂಸ್

ಕಾರ್ಯಕ್ರಮದಲ್ಲಿ ಎಸ್. ಸೋಮನಾಥ್ ಅವರಿಗೆ ‘ವೀರಭದ್ರೇಶ್ವರ ಪ್ರಶಸ್ತಿ’ ಪ್ರದಾನ ಮಾಡಲಾಯಿತು

ಬೆಂಗಳೂರು: ‘ಭಾರತೀಯ ಬಾಹ್ಯಾಕಾಶ ಸಂಸ್ಥೆಯ (ಇಸ್ರೊ) ಚಂದ್ರಯಾನ–3 ಯೋಜನೆಯ ಯಶಸ್ವಿನಿಂದಾಗಿ ವಿಜ್ಞಾನದ ಬಗ್ಗೆ ವಿದ್ಯಾರ್ಥಿಗಳಲ್ಲಿ ಆಸಕ್ತಿ ಹೆಚ್ಚಾಗಿದ್ದು, ಈ ವಿಭಾಗದ ಕಡೆಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಕರ್ಷಿತರಾಗುತ್ತಿದ್ದಾರೆ’ ಎಂದು ಶಾಸಕ ಬಸವರಾಜ ಬೊಮ್ಮಾಯಿ ತಿಳಿಸಿದರು

ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವೀರಭದ್ರೇಶ್ವರ ಜಯಂತ್ಯುತ್ಸವ ಉದ್ಘಾಟಿಸಿ, ಅವರು ಮಾತನಾಡಿದರು. ಈ ವೇಳೆ ಇಸ್ರೊ ಅಧ್ಯಕ್ಷ ಎಸ್. ಸೋಮನಾಥನ್‌ ಅವರಿಗೆ ‘ವೀರಭದ್ರೇಶ್ವರ ಪ್ರಶಸ್ತಿ’ ಪ್ರದಾನ ಮಾಡಲಾಯಿತು. 

‘ವಿದ್ಯಾರ್ಥಿಗಳು ವಿಜ್ಞಾನದ ಕಡೆ ಆಸಕ್ತಿ ತೋರುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿಜ್ಞಾನಿಗಳು ಹೊರಹೊಮ್ಮುವ ಸಾಧ್ಯತೆಯಿದೆ. ವಿಜ್ಞಾನ ಕ್ಷೇತ್ರ ಅತ್ಯಂತ ವೇಗವಾಗಿ ಬೆಳವಣಿಗೆ ಹೊಂದುತ್ತಿದೆ. ವಿಜ್ಞಾನದ ಬಲದಿಂದ ಮನುಷ್ಯನ ಹುಟ್ಟು ಮತ್ತು ಸಾವು ನಿರ್ಧರಿಸುವ ಕಾಲ ಬಂದರೂ ಅಚ್ಚರಿ ಪಡಬೇಕಾಗಿಲ್ಲ. ವಿಜ್ಞಾನ ಮತ್ತು ಅಧ್ಯಾತ್ಮ ಎರಡೂ ಮುಖ್ಯ. ಅಧ್ಯಾತ್ಮ ಆತ್ಮವಿಶ್ವಾಸ ಹುಟ್ಟಿಸಿದರೆ, ವಿಜ್ಞಾನ ವೈಜ್ಞಾ‌ನಿಕ ಬದುಕನ್ನು ಕಲಿಸುತ್ತದೆ. ವಿಜ್ಞಾನ ಇಲ್ಲದಿದ್ದರೆ ಯಾವುದೇ ಆಧುನಿಕ ವಸ್ತುಗಳು ಇರುತ್ತಿರಲಿಲ್ಲ’ ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ‘ವೀರಶೈವ ಲಿಂಗಾಯತರು ಎಲ್ಲರೊಂದಿಗೆ ಸೌಹಾರ್ದ ಸಂಬಂಧ ಹೊಂದಿದ್ದಾರೆ. ನಾವೂ ಬೆಳೆಯೋಣ ಇತರ ಸಮಾಜದವರನ್ನು ಬೆಳೆಸೋಣ ಎನ್ನುವುದು ನಮ್ಮ ಸಮಾಜದವರ ನೀತಿ. ಈ ಸಮಾಜವನ್ನು ಇತರ ಹಿಂದುಳಿದ ವರ್ಗಕ್ಕೆ ಸೇರ್ಪಡೆ ಮಾಡಬೇಕೆಂಬ ಬೇಡಿಕೆಗೆ ಸ್ಪಂದಿಸಿ ರಾಜ್ಯ ಸರ್ಕಾರವು ಕೇಂದ್ರ‌ ಸರ್ಕಾರಕ್ಕೆ ಶಿಫಾರಸು ಮಾಡಬೇಕಿದೆ. ವೀರಭದ್ರೇಶ್ವರ‌ನ ಆಶೀರ್ವಾದ ಇದ್ದರೆ ಸಮಾಜದ ಬೇಡಿಕೆ ಶೀಘ್ರವೇ ಈಡೇರಲಿದೆ’ ಎಂದು  ತಿಳಿಸಿದರು


Popular posts from this blog

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

karanataka Fast Express News