ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್
ಪಿಎಂ ವಿಶ್ವಕರ್ಮ ಯೋಜನೆ ಕುರಿತ ಕಾರ್ಯಾಗಾರ
ಬೆಂಗಳೂರು: ಕೇಂದ್ರ ಸರಕಾರದ ಪಿಎಂ ವಿಶ್ವಕರ್ಮ ಯೋಜನೆಯು ಅತ್ಯಂತ ಜನೋಪಯೋಗಿ ಕಾರ್ಯಕ್ರಮ. ಈ ಕುರಿತು ಜನರಿಗೆ ತಿಳಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇಂದು ತಿಳಿಸಿದರು.
ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಪಿಎಂ ವಿಶ್ವಕರ್ಮ ಯೋಜನೆ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಶಾಸಕ ಎಸ್.ಎ.ರಾಮದಾಸ್, ರಾಜ್ಯ ಒಬಿಸಿ ಮೋರ್ಚಾ ಅಧ್ಯಕ್ಷ ನೆ.ಲ. ನರೇಂದ್ರಬಾಬು, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ. ವಿ., ಮತ್ತು ಪ್ರಮುಖರು ಉಪಸ್ಥಿತರಿದ್ದರು.