ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

""ಜನವರಿ 1. 2024 ರಾಜ್ಯ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರ ಖಾಯಾಂತಿಗಾಗಿ ತುಮಕೂರಿನಿಂದ ಬೆಂಗಳೂರಿಗೆ ಪಾದಯಾತ್ರೆಯನ್ನು ಹಮ್ಮಿ ಕೊಳ್ಳಲಾಗಿದೆ""

 ಬೆಂಗಳೂರು: ಕರ್ನಾಟಕ ಕಾಲೇಜು ಶಿಕ್ಷಣ ಇಲಾಖೆಗೆ ಸಂಬಂಧ ಪಟ್ಟಂತೆ ರಾಜ್ಯ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಪ್ರತಿಭಟನಾ ಧರಣಿ ಸೇವಾ ಖಾಯಮಾತಿಗಾಗಿ ಮುಷ್ಕರ 34ನೇ ದಿನವೂ  ಜಿಲ್ಲಾ ವಾರು ಜಿಲ್ಲಾ ಅಧಿಕಾರಿ ಕಚೇರಿ ಮುಂದೆ ಮುಷ್ಕರ ಮುಂದುವರೆದಿದ್ದು ಸರ್ಕಾರದ ಗಮನ ಸೆಳೆಯಲು ಮುಂದಿನ ತಿಂಗಳು ಜನವರಿ 1. ತುಮಕೂರಿಂದ ಸಿದ್ದಗಂಗಾ ಮಠದಿಂದ ಬೆಂಗಳೂರಿಗೆ ಪಾತ್ರೆಯಾತ್ರೆಯನ್ನು ಮಾಡಲು  ಎಲ್ಲ ರೀತಿಯ ಸಿದ್ಧತೆಗಳನ್ನು ಕೈಗೊಂಡಿದ್ದು, ಪೊಲೀಸ್ ಇಲಾಖೆ ಅನುಮತಿ ಹಾಗೂ ಆರೋಗ್ಯ ಇಲಾಖೆಯಿಂದ ಆಂಬುಲೆನ್ಸ್ ಸೇರಿದಂತೆ ವಿವಿಧ ರೀತಿಯ ಕಮಿಟಿಗಳನ್ನು ಮಾಡಿಕೊಂಡು ಜ. 1 ರಂದು ತ್ರಿವಿಧ ದಾಸೋಹ ಕ್ಷೇತ್ರ ಸಿದ್ದಗಂಗಾ ಮಠದಿಂದ ಪಾದಯಾತ್ರೆ ಆರಂಭವಾಗಲಿದೆ ಎಂದು ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಡಾ. ಧರ್ಮವೀರ ಹಾಗೂ ಡಾ. ಮಲ್ಲಿಕಾರ್ಜುನಯ್ಯ ತಿಳಿಸಿದ್ದಾರೆ.

ಪಾದಯಾತ್ರೆ ನಡೆಸಲು ಬೆಂಗಳೂರು ಪೊಲೀಸ್ ಮಹಾನಿರ್ದೇಶಕರಿಂದ ಅನುಮತಿಯನ್ನು ಈಗಾಗಲೇ ಪಡೆದಿದ್ದು, ಆರೋಗ್ಯ ಇಲಾಖೆಯಿಂದ ಆಂಬುಲೆನ್ಸ್ ವ್ಯವಸ್ಥೆ ಮಾಡುವಂತೆ ಮನವಿ ಸಲ್ಲಿಸಲಾಗಿದೆ. ರಾಜ್ಯಾದ್ಯಂತ ಸುಮಾರು 3 ಸಾವಿರ ಅತಿಥಿ ಉಪನ್ಯಾಸಕರು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ದಾಬಸ್ ಪೇಟೆ, ನೆಲಮಂಗಲ ಮೂಲದ ಪಾದಯಾತ್ರೆ ಸಾಗಿ ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಮಾವೇಶಗೊಂಡು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಗಮನ ಸೆಳೆಯುವುದಾಗಿ ಪ್ರತಿಭಟನಾ ನಿರತ ಅತಿಥಿ ಉಪನ್ಯಾಸಕರು ತಿಳಿಸಿದ್ದಾರೆ.


Popular posts from this blog

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

karanataka Fast Express News