ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್




ಕಾಂಗ್ರೆಸ್ಸಿನ ಬೂಟಾಟಿಕೆ ಗ್ಯಾರಂಟಿಗಿಂತ ನರೇಂದ್ರ ಮೋದಿಜೀ ಅವರ ಗ್ಯಾರಂಟಿಯೇ ಶ್ರೇಷ್ಠ ಎಂಬ ಸ್ಪಷ್ಟ ಸಂದೇಶ: ವಿಜಯೇಂದ್ರ 
ಬೆಂಗಳೂರು: ಗ್ಯಾರಂಟಿಯ ಮೂಲಕ ಗೆಲುವಿನ ಭ್ರಮೆಯಲ್ಲಿ ತೇಲುತ್ತಿದ್ದ ಕಾಂಗ್ರೆಸ್ ಪಕ್ಷವು ಮರ್ಮಾಘಾತಕ್ಕೆ ಒಳಗಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು.
ಬಿಜೆಪಿ ಬೆಂಗಳೂರು ದಕ್ಷಿಣ ನೂತನ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ ಅವರ ಪದಗ್ರಹಣ ಕಾರ್ಯಕ್ರಮವು ಇಂದು ಜಯನಗರದ ಚಂದ್ರಗುಪ್ತ ಮೌರ್ಯ ಆಟದ ಮೈದಾನದಲ್ಲಿ (ಶಾಲಿನಿ ಗ್ರೌಂಡ್ಸ್) ನೆರವೇರಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಡೀ ದೇಶದಲ್ಲಿ ಲೋಕಸಭಾ ಚುನಾವಣೆಯ ಕುರಿತು ಚರ್ಚೆ ನಡೆಯುತ್ತಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯ ನಂತರ ಗೆದ್ದ ಕಾಂಗ್ರೆಸ್ ಪಕ್ಷಕ್ಕೆ ಸಹಜವಾಗಿ ಇಡೀ ದೇಶದಲ್ಲಿ ಉತ್ಸಾಹ ಇತ್ತು. ಕರ್ನಾಟಕದ ವಿಜಯಪತಾಕೆಯನ್ನು ರಾಷ್ಟ್ರದ ತುಂಬ ತೆಗೆದುಕೊಂಡು ಹೋಗುವ ಭ್ರಮೆಯಲ್ಲಿ ಕಾಂಗ್ರೆಸ್ ಪಕ್ಷದವರು ಇದ್ದರು. ಆದರೆ, ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸಗಡಗಳ ಫಲಿತಾಂಶ ಬಂದ ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಮರ್ಮಾಘಾತ ಉಂಟಾಗಿದೆ ಎಂದು ನುಡಿದರು.
3 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಒಂದು ಭಾಗ, ಹಾಗೆಯೇ ಅಲ್ಲಿರುವ ಮತದಾರರು ಸ್ಪಷ್ಟ ಸಂದೇಶವನ್ನು ದೇಶಕ್ಕೇ ನೀಡಿದ್ದಾರೆ. ಈ ದೇಶದ ಭವಿಷ್ಯದ ದೃಷ್ಟಿಯಿಂದ ಭಾರತವನ್ನು ಒಂದು ಸಮೃದ್ಧಶಾಲಿ, ಶಕ್ತಿಶಾಲಿ ರಾಷ್ಟ್ರವನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ, ಈ ದೇಶವನ್ನು ಜಗತ್ತಿನ ಅಗ್ರಗಣ್ಯ ದೇಶದ ಸಾಲಿನಲ್ಲಿ ಒಯ್ಯುವ ಶಕ್ತಿ, ಆ ಎದೆಗಾರಿಕೆ ಇರುವುದು ಪ್ರಧಾನಿ ಮೋದಿಜೀ ಅವರಿಗೆ ಮಾತ್ರ. ಹಾಗಾಗಿ ದೇಶದ ಉಜ್ವಲ ಭವಿಷ್ಯದ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷದ ಬೂಟಾಟಿಕೆ ಗ್ಯಾರಂಟಿಗಿಂತ ನರೇಂದ್ರ ಮೋದಿಜೀ ಅವರ ಗ್ಯಾರಂಟಿಯೇ ಶ್ರೇಷ್ಠ ಎಂಬ ಸಂದೇಶವನ್ನು ಆ 3 ರಾಜ್ಯಗಳ ಮತದಾರರು ನೀಡಿದ್ದಾರೆ ಎಂದು ತಿಳಿಸಿದರು.
ಖರ್ಗೆಯವರ ಹೇಳಿಕೆ ಅಭಿನಂದನೆ..
ಮೋದಿಜೀ ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬ ಅಪೇಕ್ಷೆ ದೇಶದ ಮತದಾರರಲ್ಲಿದೆ. ರಾಜ್ಯ ಮತ್ತು ದೇಶದ ಮತದಾರರು ಸಹ ಮತದಾನ ದಿನಾಂಕವನ್ನು ರಣೋತ್ಸಾಹದಿಂದ ಎದುರು ನೋಡುತ್ತಿದ್ದಾರೆ. ದೇಶದ ಅಲ್ಲಲ್ಲಿ ಅವಶೇಷ ರೂಪದಲ್ಲಿರುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರಿಗೂ ದೇಶದಲ್ಲಿ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಇವತ್ತು ಅನಿಸಿದೆ ಎಂದು ವಿಜಯೇಂದ್ರ ಅವರು ವಿವರಿಸಿದರು.
ಮತದಾರರ ಆಶಯವನ್ನು ಅರ್ಥ ಮಾಡಿಕೊಂಡು ಅದನ್ನು ಜನರಿಗೆ ತಿಳಿಸಿದ ಖರ್ಗೆಯವರಿಗೆ ಅಭಿನಂದನೆಗಳು ಎಂದು ಅವರು ಹೇಳಿದರು. ರಾಜ್ಯದಲ್ಲಿ ಎಲ್ಲ 28 ಲೋಕಸಭಾ ಸ್ಥಾನಗಳಲ್ಲಿ ಗೆಲ್ಲಲು ಶ್ರಮಿಸುವಂತೆ ಅವರು ಮನವಿ ಮಾಡಿದರು.

ರಾಜ್ಯದ ಅಧ್ಯಕ್ಷನಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇನೆ. ಒಳ್ಳೆಯ ಕೆಲಸ ಮಾಡಿದ್ದರೂ ನಮ್ಮ ತಪ್ಪಿನಿಂದಾಗಿ ನಾವು ಅಧಿಕಾರದಿಂದ ದೂರವಾಗಬೇಕಾಯಿತು. ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಇದ್ದರೂ ಎಲ್ಲೂ ಸಹ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. 8 ತಿಂಗಳು ಅಧಿಕಾರ ಮಾಡಿದರೂ ಒಂದು ಜಿಲ್ಲೆಗೂ ಬಿಡಿಗಾಸನ್ನೂ ಕಾಂಗ್ರೆಸ್ ಸರಕಾರ ಬಿಡುಗಡೆ ಮಾಡಿಲ್ಲ ಎಂದು ಟೀಕಿಸಿದರು. ಕಾಂಗ್ರೆಸ್ ಸರಕಾರ ಜನಪ್ರಿಯತೆ, ಜನರ ವಿಶ್ವಾಸ ಕಳಕೊಂಡಿದೆ ಎಂದರು.
ಪ್ರಧಾನಿ ಮೋದಿಜೀ ಅವರು ಒಂದು ದಿನವೂ ವಿಶ್ರಾಂತಿ ಪಡೆಯದೆ ದೇಶದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ಭಾರತಕ್ಕೆ ಭವಿಷ್ಯವೇ ಇಲ್ಲ; ಈ ದೇಶದ ಅಭಿವೃದ್ಧಿ ಎಂಬುದು ಕನಸು, ಭಾರತ ದೇಶದಲ್ಲಿ ಭ್ರಷ್ಟಾಚಾರರಹಿತ ಆಡಳಿತ ನೀಡಲು ಸಾಧ್ಯವಿಲ್ಲ ಎಂಬ ಭಾವನೆ ಹಿಂದೆ ಯುವಕರಲ್ಲಿತ್ತು. ಆದರೆ, ಕಳೆದ ಒಂಬತ್ತೂವರೆ ವರ್ಷಗಳಲ್ಲಿ ಗಮನಾರ್ಹ ಪ್ರಗತಿ ಆಗಿದೆ. ದೇಶದ ಪ್ರತಿಯೊಬ್ಬ ಪ್ರಜೆ, ಎಲ್ಲ ಯುವಜನರಿಗೂ ಭಾರತದ ಅಭಿವೃದ್ಧಿಯ ಬಗ್ಗೆ ಅರಿವಾಗಿದೆ ಎಂದು ತಿಳಿಸಿದರು.
ದೇಶದ ಅಪ್ರತಿಮ ನಾಯಕ, ಬಿಜೆಪಿಯನ್ನು ಇಷ್ಟು ಎತ್ತರಕ್ಕೆ ಒಯ್ಯಲು ಕಾರಣೀಭೂತರಾದ ಹಾಗೂ ರಾಮಜನ್ಮಭೂಮಿ ಹೋರಾಟದ ರೂವಾರಿ ಎಲ್.ಕೆ.ಅಡ್ವಾಣಿಜೀ ಅವರಿಗೆ ಭಾರತ ರತ್ನ ಘೋಷಿಸಿದ ಶುಭ ಸಂದರ್ಭÀ ಇದು ಎಂದು ವಿವರಿಸಿದರು. 
ಅಡ್ವಾಣಿ ಅವರನ್ನು ಅಭಿನಂದಿಸಿದ ಅವರು, ಇಂಥ ಉತ್ಕøಷ್ಟ ತೀರ್ಮಾನ ಕೈಗೊಂಡ ಪ್ರಧಾನಿ ನರೇಂದ್ರ ಮೋದಿಜೀ ಅವರಿಗೆ ಕೃತಜ್ಞತೆ ಸಲ್ಲಿಸಿದರು. ತಮಗೆ ಆತ್ಮೀಯ ಸ್ವಾಗತಕ್ಕೆ ಅವರು ಸಂತಸ ಸೂಚಿಸಿದರು.
ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಮತ್ತು ಸಂಸದ ತೇಜಸ್ವಿಸೂರ್ಯ, ಶಾಸಕರಾದ ಸತೀಶ್ ರೆಡ್ಡಿ, ಎಂ. ಕೃಷ್ಣಪ್ಪ, ಎಲ್.ಎ. ರವಿಸುಬ್ರಹ್ಮಣ್ಯ, ಉದಯ್ ಗರುಡಾಚಾರ್, ವಿಧಾನಪರಿಷತ್ ಸದಸ್ಯÀ ಗೋಪಿನಾಥ್ ರೆಡ್ಡಿ ಅವರು ಉಪಸ್ಥಿತರಿದ್ದರು.



Popular posts from this blog

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

karanataka Fast Express News