ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್
ಲೋಕಸಭಾ ಚುನಾವಣೆ ಮಾಧ್ಯಮ ಕೇಂದ್ರದಲ್ಲಿ ಪೂಜೆ, ಹೋಮ
ಬೆಂಗಳೂರು: ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರವು ಹೋಟೆಲ್ “ಜಿ.ಎಂ. ರಿಜಾಯ್ಸ್” ನಲ್ಲಿ ಇಂದು ಕಾರ್ಯಾರಂಭ ಮಾಡಿತು. ಇದರ ಅಂಗವಾಗಿ ಹೋಮ ಮತ್ತು ಪೂಜೆ ನೆರವೇರಿಸಲಾಯಿತು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಲೋಕಸಭಾ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಸುನೀಲ್ ಕುಮಾರ್, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ಹಿರಿಯರಾದ ಎಂ.ಎಚ್. ಶ್ರೀಧರ್, ರಾಜ್ಯ ವಕ್ತಾರ ಜಿ.ವಿ.ಕೃಷ್ಣ, ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ, ಸಹ ಸಂಚಾಲಕ ಪ್ರಶಾಂತ್ ಕೆಡೆಂಜಿ, ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸಂಚಾಲಕ ಪ್ರಶಾಂತ್ ಮಾಕನೂರ್, ಸಹ ಸಂಚಾಲಕ ನರೇಂದ್ರ ಮೂರ್ತಿ ಅವರು ಉಪಸ್ಥಿತರಿದ್ದರು.