ಕರ್ನಾಟಕ ಪಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್


ಬಿಜೆಪಿ ರಾಜ್ಯ ಕಚೇರಿಯಲ್ಲಿ ಪಕ್ಷದ 44ನೇ ಸ್ಥಾಪನಾ ದಿನಾಚರಣೆ
ಬೆಂಗಳೂರು: ಭಾರತೀಯ ಜನತಾ ಪಕ್ಷದ 44ನೇ ಸ್ಥಾಪನಾ ದಿನಾಚರಣೆಯ ಅಂಗವಾಗಿ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಧ್ವಜಾರೋಹಣ ನೆರವೇರಿಸಿದರು.
ಲೋಕಸಭಾ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್‍ವಾಲ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಮತ್ತು ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ತದನಂತರ ದೇಶದ ಪ್ರಧಾನಿಗಳಾದ ನರೇಂದ್ರ ಮೋದಿ ಜೀ ಅವರು ಭಾರತೀಯ ಜನತಾ ಪಕ್ಷದ ಸ್ಥಾಪನಾ ದಿನಾಚರಣೆ ಅಂಗವಾಗಿ ಮಾಡುವ ಭಾಷಣವನ್ನು ವೀಕ್ಷಿಸಿ ಆಲಿಸಿದರು.

Popular posts from this blog

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

karanataka Fast Express News