ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್



""ಅಮಿತ್ ಶಾರನ್ನು ಭೇಟಿ ಮಾಡಿದ ವಿಜಯೇಂದ್ರ""

ಬೆಂಗಳೂರು: ದೇಶದ ಸುಭದ್ರತೆಗಾಗಿ ದಿಟ್ಟ ಹೆಜ್ಜೆಗಳನ್ನಿಟ್ಟು  ಇತಿಹಾಸ ನಿರ್ಮಿಸಿ ನರೇಂದ್ರ ಮೋದಿ ಅವರ ಸಂಪುಟಕ್ಕೆ ಮತ್ತೆ ಸೇರ್ಪಡೆಗೊಂಡ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಇಂದು ನವದೆಹಲಿಯ ಅವರ ಕಛೇರಿಯಲ್ಲಿ ಭೇಟಿಯಾಗಿ ಆತ್ಮೀಯವಾಗಿ ಅಭಿನಂದಿಸಲಾಯಿತು.
ಇದೇ ಸಂದರ್ಭದಲ್ಲಿ ಕಳೆದ ಲೋಕಸಭಾ ಚುನಾವಣೆಯ ಕರ್ನಾಟಕದ ಫಲಿತಾಂಶದ ಕುರಿತು ತೃಪ್ತಿ ವ್ಯಕ್ತಪಡಿಸಿದ ಅವರು ರಾಜ್ಯದ ಜನತೆಗೆ ಕೃತಜ್ಞತಾ ಪೂರ್ವಕ ಅಭಿನಂದನೆ ಸಲ್ಲಿಸಿದರು.
ರಾಜ್ಯದಲ್ಲಿ ಜನವಿರೋಧಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ  ಹೋರಾಟ ರೂಪಿಸಿರುವ ಬಿಜೆಪಿ ರಾಜ್ಯ ಘಟಕದÀ ಕುರಿತು ವಿವರ ನೀಡಲಾಯಿತಲ್ಲದೇ ಪಕ್ಷ ಸಂಘಟನೆಯನ್ನು ಇನ್ನಷ್ಟು ಬಲಗೊಳಿಸುವ ನಿಟ್ಟಿನಲ್ಲಿ ಅವರಿಂದ ಮಾರ್ಗದರ್ಶನ ಕೋರಲಾಯಿತು.





Popular posts from this blog

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

karanataka Fast Express News