ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್
*ಬೆಂಗಳೂರು ನಗರದ ಸರ್ವತೋಮುಖ ಅಭಿವೃದ್ಧಿ ಕುರಿತಂತೆ ಸನ್ಮಾನ್ಯ ಉಪ ಮುಖ್ಯಮಂತ್ರಿರವರ ಸಭೆ:*
*"ಬ್ರ್ಯಾಂಡ್ ಬೆಂಗಳೂರು" ಪರಿಕಲ್ಪನೆ ಅಡಿ ಬೆಂಗಳೂರು ನಗರದ ಸರ್ವತೋಮುಖ ಅಭಿವೃದ್ಧಿ ಕುರಿತಂತೆ ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ರವರು ಇಂದು ವಿಧಾನಸೌಧದ ಕೊಠಡಿ ಸಂಖ್ಯೆ: 334 ಸಮ್ಮೇಳನ ಸಭಾಂಗಣದಲ್ಲಿ ಸಚಿವರು ಹಾಗೂ ಶಾಸಕರುಗಳೊಂದಿಗೆ ಸಭೆ ನಡೆಸಿದರು.
ಇದೇ ವೇಳೆ ಬ್ರ್ಯಾಂಡ್ ಬೆಂಗಳೂರು ಕುರಿತ ಕಿರುಹೊತ್ತಿಗೆ ಹಾಗೂ *ರಸ್ತೆ ಗುಂಡಿ ಗಮನ* ಮೊಬೈಲ್ ಅಫ್ಲಿಕೇಷನ್ ಅನ್ನು ಅನಾವರಣಗೊಳಿಸಲಾಯಿತು.
ಈ ವೇಳೆ ಸಚಿವರಾದ ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್ ಖಾನ್, ದಿನೇಶ್ ಗುಂಡೂರಾವ್, ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ಶಾಸಕರಾದ ಎನ್.ಎ ಹ್ಯಾರೀಸ್, ಶಿವಣ್ಣ, ಡಾ. ಸಿ.ಎನ್ ಅಶ್ವತ್ ನಾರಾಯಣ್, ಭೈರತಿ ಬಸವರಾಜು, ಎ.ಸಿ ಶ್ರೀನಿವಾಸ್, ಮುನಿರಾಜು, ಸತೀಶ್ ರೆಡ್ಡಿ, ಕೆ. ಗೋಪಾಲಯ್ಯ, ರವಿಸುಬ್ರಮಣ್ಯ, ಕೃಷ್ಣಪ್ಪ, ರಿಜ್ವಾನ್ ಹರ್ಷದ್, ಉದಯ್ ಬಿ. ಗರುಡಾಚಾರ್, ಮುನಿರತ್ನ, ಎಸ್.ಟಿ ಸೋಮಶೇಖರ್, ಮಂಜುಳಾ, ಸಿ.ಕೆ ರಾಮಮೂರ್ತಿ, ಎಸ್.ಆರ್ ವಿಶ್ವನಾಥ್, ವಿಧಾನ ಪರಿಷತ್ ಸದಸ್ಯರುಗಳು, ಆಡಳಿತಗಾರರಾದ ಎಸ್.ಆರ್ ಉಮಾಶಂಕರ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್, ವಿಶೇಷ ಆಯುಕ್ತರು, ವಲಯ ಆಯುಕ್ತರು ಸೇರಿದಂತೆ ಪಾಲಿಕೆ, ಬಿಡಿಎ, ಮೆಟ್ರೋ, ಜಮಂಡಳಿ, ಪೊಲೀಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.