ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್
ಕರ್ನಾಟಕ ಸರ್ಕಾರದ ಅನುದಾನ ರೂ.336 ಕೋಟಿಗಳ ವೆಚ್ಚದಲ್ಲಿ ಸೇರ್ಪಡೆಗೊಂಡ ಒಟ್ಟು 840 ಬಸ್ಸುಗಳಲ್ಲಿ ಪ್ರಥಮ ಹಂತದ 100 ಬಿ.ಎಸ್-VI ಬಸ್ಸುಗಳನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ರವರು ಚಾಲನೆ ನೀಡಿದರು .
ಬೆಂಗಳೂರು : ನಗರದ ಸಾರ್ವಜನಿಕರ ಅನುಕೂಲಕ್ಕೆ ಮೊದಲ ಹಂತದ 100 ನೂತನ BMTC ಬಸ್ ಗಳನ್ನು ಚಾಲನೆ ನೀಡುವ ಮೂಲಕ ಒಟ್ಟು 840 ನೂತನಬಸ್ ಗಳು BMTC ಸೇರಲಿವೆ ಎಂದು ಮುಖ್ಯಮಂತ್ರಿ ತಿಳಿಸಿದರು.
ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಬಳಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ನೂತನ BMTC ಬಸ್ ಗಳನ್ನು ಚಾಲನೆ ನೀಡಿ ಮಾತನಾಡಿದರು
ಬೆಂಗಳೂರು ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇಲ್ಲಿನ ಹೆಚ್ಚುತ್ತಿರುವ ಶ್ರಮಿಕ ವರ್ಗಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ನೂತನಬಸ್ ಗಳನ್ನು BMTC ಗೆ ಸೇರ್ಪಡೆಗೊಳಿಸುವ ಜೊತೆಗೆ ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಿದ್ದಲ್ಲದೆ ನೂತನವಾಗಿ ಇನ್ನಷ್ಟು ಕ್ಯಾಂಟೀನ್ ಗಳನ್ನು ಆರಂಭಿಸುತ್ತಿದ್ದೇವೆ.
ಇದೇ ಶ್ರಮಿಕ ವರ್ಗದ ಅನುಕೂಲಕ್ಕಾಗಿ ಶಕ್ತಿ ಯೋಜನೆ ಸೇರಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ಮುಂದುವರೆಸುತ್ತಿದ್ದೇವೆ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದರು.
ಬಡವರ ಮತ್ತು ಮಧ್ಯಮ ವರ್ಗದ ವಿರೋಧಿಯಾಗಿರುವ ಬಿಜೆಪಿ ಈ ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಪ್ರಚಾರ ಮಾಡುತ್ತಿವೆ. ಈ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಈ ಗ್ಯಾರಂಟಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿ ಆಗಲಿವೆ ಎಂದರು.
ಗೃಹಲಕ್ಷ್ಮಿ ಹಣದಿಂದ ಸಾವಿರಾರು ಕುಟುಂಬಗಳು ನಾನಾ ರೀತಿಯ ಅನುಕೂಲಗಳನ್ನು ಒದಗಿಸಿಕೊಳ್ಳುತ್ತಿರುವ ಬಗ್ಗೆ ಪ್ರತಿದಿನ ಮಾಧ್ಯಮಗಳು ತೋರಿಸುತ್ತಿವೆ ಎಂದರು.
ನಾವು ಬಡವರಿಗೆ ಅಕ್ಕಿ ಕೊಡುವ ಯೋಜನೆಗೆ ಮುಂದಾದರೆ ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡದೆ ತೊಂದರೆ ನೀಡಿತು. ಆದರೆ ನಾವು ಅಕ್ಕಿಯ ಬದಲಿಗೆ, ಅಕ್ಕಿಯ ಹಣವನ್ನು ಜನರಿಗೆ ನೀಡಿ ನುಡಿದಂತೆ ನಡೆದಿದ್ದೇವೆ ಎಂದರು.
ರಾಜ್ಯದ ಪ್ರತೀ ಕುಟುಂಬಗಳಿಗೆ ಪ್ರತೀ ತಿಂಗಳಿಗೆ 4-5 ಸಾವಿರ ರೂಪಾಯಿ ಅನುಕೂಲ ಆಗುತ್ತಿದೆ. ಇದರಿಂದ ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ಶಕ್ತಿ ನೀಡಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ಸಾರಿಗ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಬಿ.ಎಸ್. ಸುರೇಶ್ (ಭೈರತಿ), ನಗರಾಭಿವೃದ್ದಿ ಸಚಿವರು, ವಸತಿ ಸಚಿವರಾದ ಜಮೀರ್ ಅಹಮದ್ , ಇಂಧನ ಸಚಿವರಾದ ಕೆ.ಜೆ.ಜಾರ್ಜ್, ರಿಜ್ವಾನ್ ಅರ್ಷದ್, ಶಾಸಕರು, ಶಿವಾಜಿನಗರ ವಿಧಾನಸಭಾ ಕ್ಷೇತ್ರ, ಎನ್.ಎ.ಹ್ಯಾರೀಸ್, ಅಧ್ಯಕ್ಷರು, ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ ಹಾಗೂ ಶಾಸಕರು, ಶಾಂತಿನಗರ ವಿಧಾನಸಭಾ ಕ್ಷೇತ್ರ, .ನಾಗರಾಜ್ ಯಾದವ್, ಶಾಸಕರು, ವಿಧಾನಪರಿಷತ್, ಕೆಕೆಆರ್ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಡಾ|| ಕೆ.ಗೋವಿಂದರಾಜು, ನಸೀರ್ ಅಹಮದ್, ಎಲ್.ಕೆ.ಅತೀಕ್, ಭಾ.ಆ.ಸೇ., ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಆರ್ಥಿಕ ಇಲಾಖೆ ಹಾಗೂ ಅಭಿವೃದ್ದಿ ಆಯುಕ್ತರು, ಗೌರವ್ ಗುಪ್ತ, ಭಾ.ಆ.ಸೇ., ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಇಂಧನ ಮತ್ತು ಮೂಲಭೂತ ಸೌಕರ್ಯ, ಕೆಯುಐಡಿಎಫ್ ಸಿ, ಎಸ್.ಆರ್. ಉಮಾಶಂಕರ್, ಭಾ.ಆ.ಸೇ., ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಡಾ|| ಎನ್.ವಿ.ಪ್ರಸಾದ್, ಭಾ.ಆ.ಸೇ., ಸರ್ಕಾರದ ಕಾರ್ಯದರ್ಶಿಗಳು, ಸಾರಿಗೆ ಇಲಾಖೆ, ವಿ.ಅನ್ಬುಕುಮಾರ್, ಭಾ.ಆ.ಸೇ., ವ್ಯವಸ್ಥಾಪಕ ನಿರ್ದೇಶಕರು, ಕರಾರಸಾನಿ, ದೀಪಾ ಚೋಳನ್, ಭಾ.ಆ.ಸೇ., ಆಯುಕ್ತರು, ನಗರ ಭೂ ಸಾರಿಗೆ ನಿರ್ದೇಶನಾಲಯ, ಶರತ್.ಬಿ., ಭಾ.ಆ.ಸೇ., ವ್ಯವಸ್ಥಾಪಕ ನಿರ್ದೇಶಕರು, ಕೆಯುಐಡಿಎಫ್ ಸಿ, ಡಾ|| ಕೆ. ನಂದಿನಿ ದೇವಿ, ಭಾ.ಆ.ಸೇ., ನಿರ್ದೇಶಕರು (ಸಿಬ್ಬಂದಿ & ಭದ್ರತೆ), ಕರಾರಸಾನಿ ಮತ್ತು ಮತ್ತಿತರ ಗಣ್ಯರು, ಸಂಸ್ಥೆಯ ಅಧಿಕಾರಿಗಳು ಮತ್ತು ಸಂಸ್ಥೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು