ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್
ಶ್ರೀ ಜಗದ್ಗುರು ರೇಣುಕಾಚಾರ್ಯ ವಿದ್ಯಾ ಸಂಸ್ಥೆಯ ಮಹಿಳಾ ಪದವಿ ಕಾಲೇಜಿನಲ್ಲಿ ಕಾಲೇಜು ವಾರ್ಷಿಕೋತ್ಸವ ಸಮಾರಂಭವನ್ನು ಆಚರಿಸಲಾಯಿತು
ಬೆಂಗಳೂರು: .ರಾಜಾಜಿನಗರದ ಎಸ್ ಜೆ ಆರ್ ಮಹಿಳಾ ಪದವಿ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಐಎಎಸ್ ಅಧಿಕಾರಿಗಳು, ಬಿಬಿಎಂಪಿ ಪೂರ್ವ ವಲಯದ ಆಯುಕ್ತರಾದ ಸ್ನೇಹಲ್ ರಾಯಮಾನೆ ವಿದ್ಯಾರ್ಥಿಗಳ ಜೀವನ ಅತ್ಯ ಅಮೂಲ್ಯ ವಾಗಿರುವಂಥದ್ದು ಏಕೆಂದರೆ ನೀವು ಭವಿಷ್ಯವನ್ನು ರೂಪಿಸಿಕೊಳ್ಳಲು ಜ್ಞಾನವನ್ನು ಪಡೆಯಲು ವಿವಿಧ ವಿಷಯಗಳ ಕುರಿತು ಚರ್ಚೆ ಮತ್ತು ಅಭ್ಯಾಸ ಮಾಡುವುದರ ಜೊತೆಗೆ ಹಲವು ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡ ವಿದ್ಯಾರ್ಥಿ ತನ್ನ ಜೀವನದಲ್ಲಿ ಗುರಿ ಮತ್ತು ಯಶಸ್ಸನ್ನ ಸಾಧಿಸಲು ಒಂದು ಮೆಟ್ಟಿಲು ಎಂದರು
ಬೆಂಗಳೂರು ನಗರ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ (ಮೌಲ್ಯಮಾಪನ) ಡಾ. ಬಿ ರಮೇಶ್ ಅಂತಿಮ ಪದವಿ ವಿದ್ಯಾರ್ಥಿನಿಯರಿಗೆ ಮುಂಬರುವ ಪರೀಕ್ಷೆಗಳನ್ನು ಹೆದರಿಸಲು ಎಲ್ಲಾ ಸಿದ್ಧತೆಗಳನ್ನ ಮಾಡಿಕೊಂಡಿದ್ದೀರಿ ಹಾಗೂ ಮುಂದಿನ ಭವಿಷ್ಯದ ಮತ್ತು ಗುರಿಯನ್ನು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕೂಡ ಪದವಿ ನಂತರ ಆಯ್ಕೆ ಮಾಡಿಕೊಂಡು, ಐಎಎಸ್ ಕೆ ಎ ಎಸ್ ಮಾಡುವ ಧೈರ್ಯ ಮಾಡಿ ಹಾಗೂ ನಾಗರಿಕ ಸೇವಾ ಪರೀಕ್ಷೆಗಳಿಗೆ ಸಿದ್ಧತೆ ನಡೆಸಿಕೊಳ್ಳಿ ಎಂದು ತಿಳಿಸಿದರು. ಬೆಂಗಳೂರು ನಗರ ವಿಶ್ವವಿದ್ಯಾಲಯದ ಪರೀಕ್ಷೆಗಳಲ್ಲಿ 2024-25 ಸಾಲಿನ ಬಿಕಾಂ ಪರೀಕ್ಷೆಗಳಲ್ಲಿ 9 ಮತ್ತು 10ನೇ ರ್ಯಾಂಕ್ , ಬಿಕಾಂ ವಿದ್ಯಾರ್ಥಿನಿಯರಾದ ಧನಲಕ್ಷ್ಮಿ ಮತ್ತು ಉಮಾಮಹೇಶ್ವರಿ ಸನ್ಮಾನಿಸಲಾಯಿತು. ಮತ್ತು ವಿಶ್ವವಿದ್ಯಾಲಯದ ಪರೀಕ್ಷೆಗಳಲ್ಲಿ ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರು ಅಂಕ ಪಡೆದುಕೊಂಡ ವಿದ್ಯಾರ್ಥಿನಿಯರಿಗೆ ವಿವಿಧ ವಿಭಾಗಗಳಿಂದ ಪ್ರಮಾಣ ಪತ್ರ ಮತ್ತು ನಗದು ಬಹುಮಾನ ನೀಡಲಾಯಿತು.
ಇದೆ ವಿದ್ಯಾ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದವರಿಗೆ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ವಿದ್ಯಾ ಸಂಸ್ಥೆಯ ಉಪಾಧ್ಯಕ್ಷರು ರಾಜೇಂದ್ರ ಪ್ರಸಾದ್ ಮತ್ತು ಕೊಟ್ರೇಶಪ್ಪ, ಖಜಾಂಚಿಗಳಾದ ವೀರಭದ್ರಯ್ಯ, ಆಡಳಿತ ಮಂಡಳಿ ಸದಸ್ಯರಾದ ಸಿದ್ದಲಿಂಗೇಶ್ವರ ಗುಂಡಗಟ್ಟಿ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರೇಮ ಸಿದ್ದರಾಜು ಹಾಗೂ ಕಾಲೇಜಿನ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳು ಮತ್ತು ಪೋಷಕರು ಪಾಲ್ಗೊಂಡಿದ್ದರು .