ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್
""ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯ ಮುಂಭಾಗ ಯೋಗ ದಿನಾಚರಣೆಯನ್ನು ಆಚರಿಸಲಾಯಿತು ""
ಬೆಂಗಳೂರು:: ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಬೆಳಿಗ್ಗೆ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಯೋಗಾಸನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಮತ್ತು ಶಾಸಕ ಡಾ. ಸಿ.ಎನ್.ಅಶ್ವತ್ಥನಾರಾಯಣ್, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್, ಅಂತಾರಾಷ್ಟ್ರೀಯ ಯೋಗ ಪಟು ರಾಘವೇಂದ್ರ ಪೈ, ಕನ್ನಡ ಚಲಚಲಚಿತ್ರ ನಟ ಕೋಮಲ್ ಕುಮಾರ್, ಕನ್ನಡ ಚಲನಚಿತ್ರ ನಟಿ ಸುಧಾರಾಣಿ, ರಾಜ್ಯ ಕಾರ್ಯದರ್ಶಿಗಳಾದ ಹೆಚ್.ಸಿ. ತಮ್ಮೇಶ್ ಗೌಡ, ಶರಣು ತಳ್ಳಿಕೇರಿ, ಡಾ. ಲಕ್ಷ್ಮೀ ಅಶ್ವಿನಿ ಗೌಡ, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಕು. ಮಂಜುಳಾ, ಪ್ರಕೋಷ್ಠಗಳ ಸಂಯೋಜಕ ಎಸ್. ದತ್ತಾತ್ರೀ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಶ್ರೀ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಮತ್ತು ರಾಜ್ಯ ಪದಾಧಿಕಾರಿಗಳು, ಗಣ್ಯ ಮಹನೀಯರು ಉಪಸ್ಥಿತರಿದ್ದರು.