ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್



""ಬಡ ವಿದ್ಯಾರ್ಥಿಗಳಿಗೆ ರಕ್ಷಾ ಫೌಂಡೇಷನ್ ವತಿಯಿಂದ ನೋಟ್ ಬುಕ್ ವಿತರಣೆ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಚಾಲನೆ""

ಬೆಂಗಳೂರು:: ಮಕ್ಕಳನ್ನು ಪ್ರೋತ್ಸಾಹಿಸುವ ರಕ್ಷಾ ಫೌಂಡೇಷನ್ ಕಾರ್ಯ ಶ್ಲಾಘನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.
ರಕ್ಷಾ ಫೌಂಡೇಷನ್ ವತಿಯಿಂದ ಇಂದು “ಚಂದ್ರಗುಪ್ತ ಮೌರ್ಯ (ಶಾಲಿನಿ) ಆಟದ ಮೈದಾನ”ದಲ್ಲಿ ಬಡ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಕ್ಷಾ ಫೌಂಡೇಷನ್ ಸಂಸ್ಥಾಪಕ ಮತ್ತು ಶಾಸಕ ಸಿ.ಕೆ.ರಾಮಮೂರ್ತಿ ಅವರ ಸೇವಾ ಚಟುವಟಿಕೆಯ ಈ ಕಾರ್ಯಕ್ರಮವನ್ನು ಅವರು ಶ್ಲಾಘಿಸಿದರು. 
ಇವತ್ತು 11ನೇ ಯೋಗ ದಿನವನ್ನು ಜಗತ್ತಿನಾದ್ಯಂತ ಆಚರಿಸುತ್ತಿದ್ದೇವೆ ಎಂದರು. ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಜೀ ಯವರ ಅಪೇಕ್ಷೆಯಂತೆ ಇಡೀ ಜಗತ್ತಿನಾದ್ಯಂತ ಎಲ್ಲ ರಾಷ್ಟ್ರಗಳಲ್ಲೂ ನಮ್ಮೆಲ್ಲರ ಹೆಮ್ಮೆಯ ಯೋಗ ದಿನವನ್ನು ಆಚರಿಸಲಾಗುತ್ತಿದೆ; ಯೋಗದ ಮಹತ್ವವನ್ನು ಜಗತ್ತಿಗೆ ಸಾರುವ ಕೆಲಸ ನಡೆಯುತ್ತಿದೆ ಎಂದು ಮೆಚ್ಚುಗೆ ಸೂಚಿಸಿದರು.
ಮಕ್ಕಳು ದೇವರ ಸಮಾನ ಹಾಗೂ ದೇವರ ಸ್ವರೂಪಿಗಳು. ಮಕ್ಕಳಲ್ಲಿ ಆ ಜಾತಿ, ಈ ಜಾತಿ, ಆ ಧರ್ಮ, ಈ ಧರ್ಮ, ಅಸ್ಪøಶ್ಯತೆ, ಕೋಪ, ಅಸೂಯೆ ಇರಲು ಸಾಧ್ಯವಿಲ್ಲ. ಕೆಟ್ಟ ಚಿಂತನೆಗಳು ಮಕ್ಕಳಲ್ಲಿ ಇರುವುದಿಲ್ಲ ಎಂದು ತಿಳಿಸಿದರು. ರ್ಯಾಂಕ್ ಪಡೆದ ವಿದ್ಯಾರ್ಥಿ- ವಿದ್ಯಾರ್ಥಿನಿಯರ ಭವಿಷ್ಯದ ಸಾಧನೆಗೆ ಶುಭ ಕೋರಿದರು. ಜೀವನದಲ್ಲಿ ಸಾಧನೆ ಮಾಡಲು ಹಾಗೂ ಆದರ್ಶಗಳನ್ನು ಮೈಗೂಡಿಸಿಕೊಳ್ಳಲು ಅವರು ಕಿವಿಮಾತು ಹೇಳಿದರು.
ಶಾಸಕ ಹಾಗೂ ರಕ್ಷಾ ಫೌಂಡೇಷನ್ ಸಂಸ್ಥಾಪಕ ಸಿ.ಕೆ. ರಾಮಮೂರ್ತಿ, ಆಹ್ವಾನಿತ ಗಣ್ಯರು, ಬೆಂಗಳೂರಿನ ಶಾಸಕರು, ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.


Popular posts from this blog

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

karanataka Fast Express News