ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್
ಬೆಂಗಳೂರಿನ ಜಯನಗರದ ರಾಗಿಗುಡ್ಡ ನಿಂದ ಹಳದಿ ಮೆಟ್ರೋ ರೈಲು ಮೂರನೇ ಹಂತದ ಸಂಚಾರಕ್ಕೆ ಮೋದಿ ಜೀ ಚಾಲನೆ
ಬೆಂಗಳೂರು: ಜಯನಗರದ ರಾಗಿಗುಡ್ಡದಿಂದ ಹೊಸದಾಗಿ ಹಳದಿ (ಯೆಲ್ಲೋ) ಮೆಟ್ರೋ ರೈಲು ಸಂಚಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಇಂದು ಚಾಲನೆ ನೀಡಿದರು. ಇದರಿಂದಾಗಿ ಬೆಂಗಳೂರಿನಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು. ಬೆಂಗಳೂರು ನಗರದ ಲಕ್ಷಾಂತರ ಜನತೆಯ ಬಹುನಿರೀಕ್ಷಿತ ಯೋಜನೆ ಇದರಿಂದ ಈಡೇರಿದಂತಾಗಿದೆ. ಸಂಚಾರ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ಇದು ಪ್ರಮುಖ ಕೊಡುಗೆ ಎಂದು ನಿರೀಕ್ಷೆ ಇದೆ.
ಮೆಟ್ರೋ ರೈಲು ಸಂಚಾರಕ್ಕೆ ಚಾಲನೆ ಕೊಟ್ಟ ನಂತರ ಮೆಟ್ರೋದಲ್ಲಿ ಎಲೆಕ್ಟ್ರಾನಿಕ್ ಸಿಟಿ ವರೆಗೂ ಪ್ರಧಾನಿಯವರು ಬಳಿಕ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದರು. ಅಲ್ಲದೇ, ಜನರು ಮತ್ತು ಮೆಟ್ರೋ ಸಿಬ್ಬಂದಿಯ ಜೊತೆ ಮಾತುಕತೆ ನಡೆಸಿದರು. ಮೆಟ್ರೋದಲ್ಲಿ ಪ್ರಯಾಣಿಸಲು ಅವಕಾಶ ಲಭಿಸಿದ ವಿದ್ಯಾರ್ಥಿವೃಂದದ ಜೊತೆ ಕೂಡ ಅವರು ಸಂವಾದ ಮಾಡಿದರು. ಪ್ರಧಾನಿಯವರು ಸಾಗುವ ಮಾರ್ಗದಲ್ಲಿ ಪುಷ್ಪವೃಷ್ಟಿ ಮಾಡಲಾಯಿತು. ಮಳೆ ಇದ್ದರೂ ಜನರು ಅತ್ಯಂತ ಉತ್ಸಾಹದಿಂದ ಭಾಗವಹಿಸಿದ್ದರು.
ಮುಂಜಾನೆ ದೆಹಲಿಯಿಂದ ಬೆಂಗಳೂರಿಗೆ ಇಂದು ಬಂದಿಳಿದ ಗೌರವಾನ್ವಿತ ಪ್ರಧಾನಿ ಮೋದಿ ಜೀ ಅವರು ಕೆಎಸ್‍ಆರ್ ರೈಲ್ವೇ ನಿಲ್ದಾಣಕ್ಕೆ ತೆರಳಿದರು. ಅಲ್ಲಿ ಅವರು ಬೆಂಗಳೂರು - ಬೆಳಗಾವಿ ಒಂದೇ ಭಾರತ್ ರೈಲಿಗೆ ಚಾಲನೆ ನೀಡಿದರು. ಅಮೃತ್‍ಸರ್ - ಶ್ರೀ ಮಾತಾ ವೈಷ್ಣೋದೇವಿ ಮತ್ತು ನಾಗಪುರ್-ಪುಣೆ ವಂದೇ ಭಾರತ್ ರೈಲುಗಳಿಗೆ ಅವರು ಆನ್‍ಲೈನ್ ಮೂಲಕ ಚಾಲನೆ ನೀಡಿದರು.
ಮೆಟ್ರೋ ರೈಲು ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾನ್ಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್, ವಿ.ಸೋಮಣ್ಣ, ಕು.ಶೋಭಾ ಕರಂದ್ಲಾಜೆ, ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ಸಂಸದರಾದ ತೇಜಸ್ವಿ ಸೂರ್ಯ, ಪಿ.ಸಿ. ಮೋಹನ್, ಪ್ರಮುಖರು ಉಪಸ್ಥಿತರಿದ್ದರು
ಮಾನ್ಯ ಪ್ರಧಾನಿಗಳಾದ ಮೋದಿ ಜೀ ಅವರು ಇಂದು 15,611 ಕೋಟಿ ರೂ ವೆಚ್ಚದ ಬೆಂಗಳೂರು ಮೆಟ್ರೋ ಹಂತ-3 ರ ಶಂಕುಸ್ಥಾಪನೆಯನ್ನೂ ನೆರವೇರಿಸಲಿದ್ದಾರೆ.