ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್


‘ಧರ್ಮಸ್ಥಳ ಚಲೋ’ಗೆ ಚಾಲನೆ

ಬೆಂಗಳೂರು: ಬಿಜೆಪಿ ಯಲಹಂಕ ವತಿಯಿಂದ ಶಾಸಕ ಎಸ್.ಆರ್. ವಿಶ್ವನಾಥ್ ಅವರ ನೇತೃತ್ವದಲ್ಲಿ ನೆಲಮಂಗಲ ಟೋಲ್‍ನಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ತನಕ ನಡೆಯುವ “ಧರ್ಮಸ್ಥಳ ಚಲೋ” ಅಭಿಯಾನಕ್ಕೆ ಇಂದು ಬೆಳಿಗ್ಗೆ ಚಾಲನೆ ನೀಡಲಾಯಿತು. ಪೂಜಾ ವಿಧಿವಿಧಾನ ನೆರವೇರಿಸಿ ನೂರಾರು ವಾಹನಗಳ ಅಭಿಯಾನವನ್ನು ಆರಂಭಿಸಲಾಯಿತು. ಅಪಪ್ರಚಾರ ಖಂಡಿಸಿ ಯಾತ್ರೆ ನಡೆಯುತ್ತಿದ್ದು, ಸಂಜೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿದ್ದಾರೆ. ಶಾಸಕ ಎಸ್.ಆರ್. ವಿಶ್ವನಾಥ್, ಹಾಲು ಪ್ರಕೋಷ್ಠದ ರಾಜ್ಯ ಸಂಚಾಲಕ ಬೇಲೂರು ರಾಘವೇಂದ್ರ ಶೆಟ್ಟಿ, ಪ್ರಮುಖರು, ಕಾರ್ಯಕರ್ತರು, ಅಭಿಮಾನಿಗಳು ಇದ್ದರು.



Popular posts from this blog

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್