ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್
ಕಲೆ, ಸಂಸ್ಕøತಿ, ಸಂಗೀತದ ಅಭಿರುಚಿಯಿಂದ ಉತ್ಸಾಹ, ಲವಲವಿಕೆಯಿಂದ ಕೆಲಸ: ಬಿ.ವೈ.ವಿಜಯೇಂದ್ರ
ಬೆಂಗಳೂರು: ಬೆಂಗಳೂರು: ರಾಜಕೀಯ ಜಂಜಾಟದಿಂದ ಹೊರಬರಲು ಕಲೆ, ಸಂಸ್ಕøತಿ, ಸಂಗೀತದ ಅಭಿರುಚಿ ಬೆಳೆಸಿಕೊಂಡರೆ ನಾವು ಉತ್ಸಾಹ, ಲವಲವಿಕೆಯಿಂದ ಕೆಲಸ ಮಾಡಲು ಸಾಧ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.
ಜಗನ್ನಾಥ ಬಳಗ ಮತ್ತು ಸಾಂಸ್ಕøತಿಕ ಪ್ರಕೋಷ್ಠದ ವತಿಯಿಂದ ತೆಲುಗು ವಿಜ್ಞಾನ ಸಮಿತಿಯ ಶ್ರೀಕೃಷ್ಣ ದೇವರಾಯ ಸಭಾಂಗಣದಲ್ಲಿ ಇಂದು ಏರ್ಪಡಿಸಿದ ‘ಮಾಸದ ಮಾಧುರ್ಯ’ 100 ರ ಸಂಭ್ರಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇದಕ್ಕೂ ಮೊದಲು ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೀ ಅವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ ನಡೆಯಿತು.
ಮಾಸದ ಮಾಧುರ್ಯದ ಮೂಲಕ ಜಗನ್ನಾಥ ಭವನವು ಕೇವಲ ರಾಜಕೀಯ ಚಟುವಟಿಕೆಗಳಿಗೆ ಸೀಮಿತವಾಗದೇ, ಕಲೆ, ಸಂಸ್ಕøತಿ, ಪರಂಪರೆ ಉಳಿಸಿ ಬೆಳೆಸುವ ಕೇಂದ್ರವಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ 100ನೇ ವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲಿ ‘ಮಾಸದ ಮಾಧುರ್ಯ’ 100 ರ ಸಂಭ್ರಮ ಆಚರಿಸುತ್ತಿದೆ. ಈ ಶುಭ ಸಂದರ್ಭದಲ್ಲಿ ನಾನು ರಾಜ್ಯದ ಅಧ್ಯಕ್ಷನಾಗಿ ಜವಾಬ್ದಾರಿ ಹೊತ್ತಿರುವುದು ನನ್ನ ಸೌಭಾಗ್ಯ ಎಂದು ಭಾವಿಸುವುದಾಗಿ ತಿಳಿಸಿದರು. ಮಾಧುರ್ಯ ತಂಡಕ್ಕೆ ನಿರಂತರ ಬೆಂಬಲ ಕೊಡುವುದಾಗಿ ಹೇಳಿದರು.
ಲಕ್ಷಾಂತರ ಕಾರ್ಯಕರ್ತರು ನಮ್ಮ ಬಗ್ಗೆ ಅಪೇಕ್ಷೆ- ನಿರೀಕ್ಷೆ ಇಟ್ಟುಕೊಂಡು ಜವಾಬ್ದಾರಿ ಕೊಟ್ಟಿದ್ದಾರೆ ಎಂದು ತಿಳಿಸಿದರು. ಸಾಹಿತ್ಯ, ಸಂಗೀತ, ಕಲೆ ಗೊತ್ತಿಲ್ಲದೇ ಇದ್ದರೆ ಪ್ರಾಣಿಗೆ ಸಮಾನ ಎಂದು ನೆನಪಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರ ಮನ್ ಕೀ ಬಾತ್ ವೀಕ್ಷಿಸಿದ್ದೇವೆ. ದೇಶದ ಸಾಧಕರು, ಆಗುಹೋಗುಗಳ ಬಗ್ಗೆ, ಸಕಾರಾತ್ಮಕ ಚಿಂತನೆಯೊಂದಿಗೆ ಪ್ರಧಾನಿಯವರು ಮಾತನಾಡುತ್ತಾರೆ. ಮೋದಿಜೀ ಅವರು ತಾವು ದೇಶದ ಸೇವಕ ಎಂದು ಯಾವಾಗಲೂ ತಿಳಿಸುತ್ತಾರೆ ಎಂದು ಹೇಳಿದರು.
ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಮತ್ತು ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ್, ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್, ವಿಧಾನಪರಿಷತ್ ಸದಸ್ಯರಾದ ಎಸ್. ಕೇಶವ್ ಪ್ರಸಾದ್, ಡಾ. ಎಂ.ಜಿ.ಮುಳೆ, ಶ್ರೀಮತಿ ಭಾರತಿ ಶೆಟ್ಟಿ, ಹೆಚ್.ಎಸ್.ಗೋಪಿನಾಥ್ ರೆಡ್ಡಿ, ಮಾಜಿ ಶಾಸಕ ನೆ.ಲ ನರೇಂದ್ರಬಾಬು, ವಿಧಾನಪರಿಷತ್ ಮಾಜಿ ಸದಸ್ಯರಾದ ವೈ.ಎ ನಾರಾಯಣಸ್ವಾಮಿ, ಅ. ದೇವೇಗೌಡ, ಶ್ರೀಮತಿ ತಾರಾ ಅನುರಾಧ, ಮಾಜಿ ನಿಗಮ ಮಂಡಳಿ ಅಧ್ಯಕ್ಷರು ಮತ್ತು ಖ್ಯಾತ ಚಲನಚಿತ್ರ ನಟಿ ಶ್ರೀಮತಿ ಶ್ರುತಿ, ಹಿರಿಯ ನ್ಯಾಯವಾದಿ ಅಶೋಕ್ ಹಾರನಹಳ್ಳಿ, ಸಂಸ್ಕಾರ ಭಾರತಿ ಪ್ರಾಂತೀಯ ಅಧ್ಯಕ್ಷ ಮತ್ತು ಖ್ಯಾತ ಚಲನಚಿತ್ರ ನಟ ಸುಚೇಂದ್ರ ಪ್ರಸಾದ್, ಬೆಂಗಳೂರು ಉತ್ತರ ಜಿಲ್ಲಾ ಅಧ್ಯಕ್ಷ ಎಸ್.ಹರೀಶ್, ಮಾಸದ ಮಾಧುರ್ಯ ಕಾರ್ಯಕ್ರಮದ ಸಂಚಾಲಕ ದತ್ತಗುರು ಹೆಗಡೆ, ಬಿಜೆಪಿ ಕಲೆ ಮತ್ತು ಸಾಂಸ್ಕøತಿಕ ಪ್ರಕೋಷ್ಠದ ಸಂಚಾಲಕಿ ಶ್ರೀಮತಿ ರೂಪ ಅಯ್ಯರ್, ಮಲ್ಲೇಶ್ವರ ಮಂಡಲ ಅಧ್ಯಕ್ಷ ಕೇಶವ ಐತಾಳ್ ಭಾಗವಹಿಸಿದ್ದರು.