ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್
""ಬೆಂಗಳೂರಿನ ಉತ್ತರ ತಾಲೂಕಿನ ಗಂಗೋಂಡನಹಳ್ಳಿಯಲ್ಲಿ ಸಾಮೂಹಿಕ ಅತ್ಯಾಚಾರ ಘಟನೆಯನ್ನು ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ರಾಮಕೃಷ್ಣಪ್ಪ ಹೆಚ್ ಹಾಗೂ ನೆಲಮಂಗಲ ಮಂಡಲ ಅಧ್ಯಕ್ಷರಾದ ಜಗದೀಶ್ ಚೌದ್ರಿ ತೀವ್ರ ಖಂಡನೆ"
ಬೆಂಗಳೂರಿನ :ಮಾದನಾಯಕನಹಳ್ಳಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹಿಳೆ ಮನೆಗೆ ರಾತ್ರೋರಾತ್ರಿ ಐವರು ಆರೋಪಿಗಳು ನುಗ್ಗಿದ್ದಾರೆ. ಪೀಣ್ಯ ಪೊಲೀಸರ ಇನ್ಸ್ಪೆಕ್ಟರ್ ಎಂದು ಮನೆಗೆ ನುಗ್ಗಿದ್ದಾರೆ ಎಂದರೆ ಇವರಿಗೆ ಯಾವ ಧೈರ್ಯ ಮತ್ತು ಬೆಂಬಲ ಯಾರೇ ಇದ್ದರೂ ಅವರ ಮೇಲೆ ಈ ಕೂಡಲೇ ಕ್ರಮ ತೆಗೆದುಕೊಳ್ಳಿ. ಸರ್ಕಾರದ ವೈಫಲ್ಯ ಎಂದು ಸರ್ಕಾರ ಇದು ಸತ್ತಂಗೆ ಹಾಗೆ ಗೃಹ ಸಚಿವರು ಮಲಗಿದ್ದಾರೆ ಎಲ್ಲಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾದ ರಾಮಕೃಷ್ಣಪ್ಪ ಎಚ್ ಸುದ್ದಿಗಾರಿಗಿ ತಿಳಿಸಿದರು
ಒಟ್ಟು ಐವರು ಆರೋಪಿಗಳು ಮೂರು ಮನೆಯಲ್ಲಿ ವಾಸವಾಗಿದ್ದ ಪಶ್ಚಿಮ ಬಂಗಾಳದ ಮಹಿಳೆ ಮನೆಗೆ ನುಗ್ಗಿದ್ದಾರೆ. ಇಬ್ಬರು ಗಂಡಸರನ್ನ ಕಟ್ಟಿ ಹಾಕಿ, ಬಳಿಕ ಹಲ್ಲೆ ಮಾಡಿ ಅತ್ಯಾಚಾರ ಮಾಡಲಾಗಿದೆ ಘಟನೆ ಬೆಳಕಿಗೆ ಬಂದ ಬಳಿಕ ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಿದ್ದೇವೆ.ಸಂತ್ರಸ್ತ ಮಹಿಳೆಯ 14 ವರ್ಷದ ಮಗ ಸೇರಿದಂತೆ ಸಂತ್ರಸ್ತೆ ಸ್ನೇಹಿತೆ ಮೇಲೂ ಹಲ್ಲೆ ಮಾಡಿದ್ದಾರೆ. ಹಲ್ಲೆ ಬಳಿಕ ಪಕ್ಕದ ಮನೆಯ ರೂಂಗೆ ಎಳೆದೊಯ್ದು ರೇಪ್ ಮಾಡಿದ್ದರು. ಘಟನೆಯ ವೇಳೆ ಸಂತ್ರಸ್ತ ಮಹಿಳೆಯ ಪುತ್ರ 112ಗೆ ಕರೆ ಮಾಡಿದ್ದ. ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಆರೋಪಿಗಳು ಎಸ್ಕೇಪ್ ಆಗಿದ್ದರು. ಇಬ್ಬರ ಗುರುತು ಹಿಡಿದು ಪೊಲೀಸರಿಗೆ ಸಂತ್ರಸ್ತೆ ಕುಟುಂಬ ಮಾಹಿತಿ ನೀಡಿದ್ದು ಸದ್ಯ ಮೂವರನ್ನು ಬಂಧಿಸಲಾಗಿದೆ. ಗ್ಯಾಂಗ್ ರೇಪ್ ಹಾಗೂ ರಾಬರಿ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ ಇದೀಗ ಮೂವರು ಆರೋಪಿಗಳ ಬಂಧನವಾಗಿದೆ. ತಲೆಮರೆಸಿಕೊಂಡಿರುವ ಮತ್ತಿಬ್ಬರು ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಘಟನೆ ಬಗ್ಗೆ ಬೆಂಗಳೂರು ಗ್ರಾಮಾಂತರ ಎಸ್‌ಪಿ ಸಿಕೆ ಬಾಬಾ ಹೇಳಿಕೆ ನೀಡಿದ್ದಾರೆ
ಇದು ನಮಗೆ ತಿಳಿದಿರುವ ವಿಷಯ ಕಾಂಗ್ರೆಸ್ಸಿಗರು ಯಾವುದೇ ಮುಲಾಜಿ ಇಲ್ಲದೆ ಅವನ ಯಾರೇ ಇರಲಿ ಬಂಧಿಸಬೇಕು ಎಂದು ಅಗ್ರಹ ಮಾಡಿದರು.
: