ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್


 ""ಜೆಡಿಎಸ್ ಪಕ್ಷದಿಂದ ರಾಜ್ಯ ಮತ್ತು ರಾಷ್ಟ್ರೀಯ ಪರಿಷತ್ ಗಳ ಸಭೆ ಹಾಗೂ ರಾಷ್ಟೀಯ ಸಮಾವೇಶ ""

ಬೆಂಗಳೂರು :  ಪಕ್ಷದ ರಾಷ್ಟ್ರೀಯ ಪರಿಷತ್ ಮತ್ತು ರಾಷ್ಟೀಯ ಸಮಾವೇಶದ ಅಂಗವಾಗಿ ಪಕ್ಷದ ರಾಜ್ಯ ಕಚೇರಿ ಜೆ.ಪಿ ಭವನದಲ್ಲಿ ಸಂಜೆ ನಾಲ್ಕು ಗಂಟೆಗೆ ದ್ವಜಾರೋಹಣ ನಡೆಸಲಾಗುವುದು.

ನಂತರ ಸಂಜೆ 5 ಗಂಟೆಗೆ ಪಕ್ಷದ ರಜತ ಮಹೋತ್ಸವ ಆಚರಣೆ ಅಂಗವಾಗಿ ಪಕ್ಷ ನಡೆದು ಬಂದ ದಾರಿ   ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಅವರು ಸಾಧನೆ ಕುರಿತು ಪ್ರದರ್ಶಿಸಿ ಉದ್ಘಾಟನೆ ನಡೆಸಲಾಗುವುದು.

ಸಂಜೆ 6:30ಕ್ಕೆ ಪಕ್ಷದ ರಾಜ್ಯ ಪರಿಷತ್, ರಾಷ್ಟೀಯ ಪರಿಷತ್ ವಿವಿಧ ರಾಜ್ಯಗಳಿಂದ ಬಂದಿರುವ ಪ್ರತಿನಿಧಿಗಳ ಜತೆ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಸಭೆ ಏರ್ಪಡಿಸಲಾಗಿದೆ.

ಸಭೆಯಲ್ಲಿ ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್  ರಾಷ್ಟ್ರೀಯ ಅಧ್ಯಕ್ಷರಾದ  H.D. ದೇವೇಗೌಡರು ಮತ್ತು ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ Hd ಕುಮಾರಸ್ವಾಮಿ ಅವರು  ಕೋರ್ ಕಮಿಟಿ ಸದಸ್ಯರು
ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಭಾಗಿಯಾಗುತ್ತಾರೆ.



.

Popular posts from this blog

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

karanataka Fast Express News