ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್


""ಲಕ್ಷ ಕಂಠ ಗೀತಾವಾಚನ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ''

ಉಡುಪಿ:  ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಜೀ ಅವರು ಇಂದು ಉಡುಪಿಯಲ್ಲಿ ಲಕ್ಷ ಕಂಠ ಗೀತಾಪಠಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ನವ ಸಂಕಲ್ಪ ಭಾರತೀಯರು ಪಾಲನೆ ಮಾಡಬೇಕಾದ ಸಂಕಲ್ಪಗಳು.  
1.ನೀರು ಮತ್ತು ನದಿಗಳ ಸಂರಕ್ಷಣೆ ಮಾಡುವುದು. 
2.ಪ್ರತಿಯೊಬ್ಬರು ತಾಯಿಯ ಹೆಸರಿನಲ್ಲಿ ಒಂದು ಸಸಿಯನ್ನು ನೆಟ್ಟು ಬೆಳೆಸುವುದು.
3.ದೇಶದ ಒಬ್ಬ ಬಡವನ ಬದುಕನ್ನು ಸುಧಾರಿಸಲು ಸಹಕರಿಸಬೇಕು. 
4.ಸ್ವದೇಶಿಯ ಬಗ್ಗೆ ಚಿಂತನಶೀಲರಾಗಿರಬೇಕು ಆತ್ಮ ನಿರ್ಭರ ಭಾರತ ನಿರ್ಮಾಣ ಮಾಡಬೇಕು. 
5.ಆರೋಗ್ಯಕರ ಮತ್ತು ಸಮತೋಲನ ಆಹಾರ ಪದ್ಧತಿ, ಅಳವಡಿಸಿಕೊಳ್ಳಬೇಕು .
6.ಸಾವಯವ ಕೃಷಿಗೆ ಹೆಚ್ಚು ಮಹತ್ವವನ್ನು ನೀಡಬೇಕು 
ಸಾವಯವ ಕೃಷಿಗೆ ಹೆಚ್ಚು ಮಹತ್ವವನ್ನು ನೀಡಬೇಕು. 
7.ಯೋಗವನ್ನು ಜೀವನ ಪದ್ಧತಿಯಾಗಿ ಅಳವಡಿಸಿಕೊಳ್ಳಬೇಕು .
8.ದೇಶದಲ್ಲಿರುವ ಕನಿಷ್ಠ 25 ಐತಿಹಾಸಿಕ ಆಧ್ಯಾತ್ಮಿಕ ಸ್ಥಳಗಳಿಗೆ ಭೇಟಿ ನೀಡಬೇಕು. 
9.ವಿಕಸಿತಾ ಭಾರತ ನಿರ್ಮಾಣ ಮಾಡಬೇಕು ಕರ್ನಾಟಕ ವಿಕಸಿತ ರಾಜ್ಯ ಆಗಬೇಕು. 
ಎಂದು ಒಂಬತ್ತು ಸಂಕಲ್ಪಗಳನ್ನ ರಾಷ್ಟ್ರದ ಪ್ರಧಾನಿ ನರೇಂದ್ರ ಮೋದಿಜಿ ಅವರು ರಾಜ್ಯ ಮತ್ತು ರಾಷ್ಟ್ರ ಜನತೆಗೆ ಮನವಿ ಮಾಡಿದರು. ಈ ಸಂದರ್ಭದಲ್ಲಿ
 ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಗೌರವಾನ್ವಿತ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಬಿ.ವೈ.ರಾಘವೇಂದ್ರ, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ, ಶಾಸಕರಾದ ಯಶಪಾಲ ಸುವರ್ಣ, ವಿ. ಸುನೀಲ್ ಕುಮಾರ್, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಪ್ರಮುಖರು ಪಾಲ್ಗೊಂಡಿದ್ದರು.

Popular posts from this blog

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್