ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

""ಪಕ್ಷ ಮರೆತು ಸಮಾಜ ಒಗ್ಗೂಡಿಸುವ ಕೆಲಸ ಮಾಡಿದ್ದ
ಶಾಮನೂರು ಶಿವಶಂಕರಪ್ಪ""- "ಬಿ.ವೈ.ವಿಜಯೇಂದ್ರ"
ದಾವಣಗೆರೆ: ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ನಾಡಿಗೆ ಹಾಗೂ ವಿಶೇಷವಾಗಿ ವೀರಶೈವ ಲಿಂಗಾಯತ ಸಮಾಜಕ್ಕೆ ತುಂಬಲಾರದ ನಷ್ಟ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
ಇಂದು ಪಾರ್ಥಿವ ಶರೀರದ ದರ್ಶನ ಪಡೆದು ಗೌರವ ಸಲ್ಲಿಸಿದ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಶಾಮನೂರು ಶಿವಶಂಕರಪ್ಪನವರು ರಾಜಕೀಯ ಕ್ಷೇತ್ರದ ಜೊತೆಜೊತೆಗೆ ಶಿಕ್ಷಣ ಕ್ಷೇತ್ರದಲ್ಲಿ ಯಾವ ರೀತಿ ತಮ್ಮ ಸೇವೆ ಸಲ್ಲಿಸಿದ್ದಾರೆ; ವೀರಶೈವ ಸಮಾಜವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಯಾವ ರೀತಿ ಅವರ ಕೊಡುಗೆ ಇದೆ ಎಂಬುದು ಇಡೀ ರಾಜ್ಯದ ಜನತೆಗೆ ಗೊತ್ತಿದೆ ಎಂದರು.
ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ಬಂದಾಗಲೂ ಪಕ್ಷವನ್ನು ಮರೆತು ಸಮಾಜ ಒಗ್ಗೂಡಿಸುವ ಕೆಲಸ ಅವರ ನೇತೃತ್ವದಲ್ಲಿ ಆಗಿತ್ತು. ಅವರ ಅಗಲಿಕೆಯಿಂದ ಇಡೀ ಸಮಾಜಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ತಿಳಿಸಿದರು. ಅವರ ಕುಟುಂಬದ ಸದಸ್ಯರು, ನಾಡಿನ ಜನತೆ, ಸಮಾಜದ ಎಲ್ಲರಿಗೂ ನೋವನ್ನು ತಡೆಯುವ ಶಕ್ತಿಯನ್ನು ಆ ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದರು. ಶಾಮನೂರು ಶಿವಶಂಕರಪ್ಪ ಅವರ ಹೆಸರು ಚಿರಸ್ಥಾಯಿಯಾಗಿ ಇರುವಂತೆ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. 

Popular posts from this blog

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

karanataka Fast Express News